Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಳಚಿದ ಸಾಹಿತ್ಯ ಲೋಕದ ಕೊಂಡಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ

ಬೆಂಗಳೂರು: ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಕೋಣನಕುಂಟೆ ಆಸ್ಟ್ರಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿವಾಸ ಎಲಚೇನಹಳ್ಳಿ ಮೆಟ್ರೋ ಸ್ಟೇಷನ್ ಪಕ್ಕದಲ್ಲೇ ಇರುವ ಜ್ಯೋತಿ ಶಾಲೆಯ ಬಳಿಯಿದೆ. ಕೆಲಹೊತ್ತಿನಲ್ಲೇ ಅಲ್ಲಿಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ ಎಂದು ಅಪ್ತ ವಲಯ ತಿಳಿಸಿದೆ.

ಧಾರವಾಡದವರಾದ ಚಂಪಾ ಅವರು ಕೆಲವಾರು ವರ್ಷಗಳಿಂದ ಬೆಂಗಳೂರು ನಿವಾಸಿಯಾಗಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.

ಸುದೀರ್ಘ ಅವಧಿ ಅವರು “ಸಂಕ್ರಮಣ” ಹೆಸರಿನ ಸಾಹಿತ್ಯ ಪತ್ರಿಕೆಯ ಸಂಪಾದಕರು- ಪ್ರಕಾಶಕರೂ ಆಗಿದ್ದರು. ಕನ್ನಡದ ಹಲವು ಸಾಹಿತಿಗಳನ್ನು ಗುರುತಿಸಿದ ಹೆಗ್ಗಳಿಕೆಯನ್ನು ಈ ಪತ್ರಿಕೆ ಹೊಂದಿದೆ. ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮೌಲಿಕ ಕೆಲಸಗಳನ್ನು ಮಾಡಿರುವ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ.

ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು. ನಾಡು – ನುಡಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಇವರ ಭೌತಿಕ ಅಗಲಿಕೆಗೆ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ.

No Comments

Leave A Comment