Log In
BREAKING NEWS >
ಅಪಾರ ಭಕ್ತಜನಸ್ತೋಮದ ನಡುವೆ ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ "ರ೦ಗಪೂಜೆ" ಸ೦ಪನ್ನ...ಏಕಾದಶಿಯ ಪ್ರಯುಕ್ತ ಸೋಮವಾರದ೦ದು ಸ೦ಜೆ 5ಗ೦ಟೆಗೆ ನಗರಭಜನೆ ಆರ೦ಭ...

ಮಂಗಳೂರು: ಸೀ ಫುಡ್ ಘಟಕದಲ್ಲಿ ರಾಸಾಯನಿಕ ಸೋರಿಕೆ, 26 ಮಂದಿ ಅಸ್ವಸ್ಥ

ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸೀ ಫುಡ್ ಘಟಕದಲ್ಲಿ ರಾಸಾಯನಿಕ ಸೋರಿಕೆಯಾದ ಪರಿಣಾಮ ಕಾರ್ಖಾನೆಯ 26 ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಘಟನೆ ವೇಳೆ ಕಾರ್ಖಾನೆಯಲ್ಲಿ 80 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ನಿನ್ನೆ ಬೆಳಿಗ್ಗೆ ರಾಸಾಯನಿಕ ಸೋರಿಕೆಯಾಗಿದೆ. ಕೂಡಲೇ ಕಾರ್ಖಾನೆಯಲ್ಲಿದ್ದ ಸೈರನ್ ಮೊಳಗಿ ಇತರೆ ಕಾರ್ಮಿಕರಿಗೆ ಅಲರ್ಟ್ ನೀಡಿದೆ. ಇದರಿಂದಾಗಿ ಫ್ಯಾಕ್ಟರಿಯಲ್ಲಿದ್ದ ನೌಕರರು ತುರ್ತಾಗಿ ಹೊರಗೆ ಬಂದಿದ್ದಾರೆ. ಆದರೆ, ರಾಸಾಯನಿಕ ಸೋರಿಕೆಗೆ 26 ಮಂದಿ ಒಳಗಾಗಿದ್ದು, 26 ಮಂದಿಯಲ್ಲಿ ಉಸಿರಾಟ ಸಮಸ್ಯೆ, ತಲೆ ತಿರುಗುವಿಕೆ ಶುರುವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಚಿಕಿತ್ಸೆ ಬಳಿಕ 10 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದು, ಎಲ್ಲರನ್ನೂ ನಿಗಾದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಮತ್ತು ತುರ್ತು ಸಿಬ್ಬಂದಿ ಸೋರಿಕೆ ತಡೆದು ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದರು.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪ್ರೆಸರ್ ಫ್ಲೇಂಜ್‌ನಲ್ಲಿ ಅಮೋನಿಯಂ ಸೋರಿಕೆಯಾಗಿದ್ದು, ಒಂದು ಗಂಟೆಯೊಳಗೆ ಪ್ಲಗ್ ಆಗಿರುವುದು ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಕೆ ತಿಳಿಸಿದ್ದಾರೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ವರದಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ಸಿಬ್ಬಂದಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ನಡುವೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಿತು.

No Comments

Leave A Comment