Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಭಾರತದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿಂದು 2.68 ಲಕ್ಷ ಹೊಸ ಕೇಸ್ ಪತ್ತೆ, 402 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ನಾಗಾಲೋಟ ಮುಂದುವರೆದಿದ್ದು, ಶನಿವಾರ 2,68,833  ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 402 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,752ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,22,684 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,49,47,390ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,87,457 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,90,99,084 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,54,61,39,465 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆ
ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 6,041 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 6,041ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment