Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಶ್ರೀ ಕೃಷ್ಣಮಠದಲ್ಲಿ ವಾರ್ಷಿಕ ಚೂರ್ಣೋತ್ಸವ ಸ೦ಭ್ರಮದಿ೦ದ ಸ೦ಪನ್ನ…

ಉಡುಪಿ:ಶ್ರೀ ಕೃಷ್ಣಮಠದಲ್ಲಿ ವಾರ್ಷಿಕವಾಗಿ ನಡೆಯುವ ಚೂರ್ಣೋತ್ಸವ ಹಾಗೂ ಅವಭ್ರತ ಸ್ನಾನ ಇಂದು (ಶನಿವಾರದ೦ದು) ನಡೆಯಿತು.

ಭಾವಿ ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಹಾಗೂ ಶಿರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಬ್ರಹ್ಮರಥದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಉತ್ಸವ ನಡೆಯಿತು.

ಪರ್ಯಾಯ ಶ್ರೀಪಾದರು ಮಧ್ವಮಂಟಪದಲ್ಲಿ ತೊಟ್ಟಿಲು ಪೂಜೆ ನೆರವೇರಿಸಿ ಅಷ್ಟ ಮಠಾಧೀಶರಿಗೆ ಗಂಧಾದ್ಯುಪಚಾರಗಳನ್ನು  ಮಾಡಿಗೌರವಿಸಿದರು.

ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು.ನಂತರ ಮಧ್ವಸರೋವರದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಗಳಿಗೆ ಅವಭ್ರತ ನಡೆಯಿತು.

No Comments

Leave A Comment