ಚು೦…ಚು೦ ಚಳಿಯಲಿ ವೈಭವದ ಮೆರವಣೆಗೆಯೊ೦ದಿಗೆ ಸರ್ವಜ್ಞ ಪೀಠವನ್ನೇರಿದ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು
ಉಡುಪಿ:ಕಾಪು ಬಳಿಯ ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪವಿತ್ರ ಸ್ನಾನ ಮಾಡಿ ಉಡುಪಿ ಆಗಮಿಸಿ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿಸಿ ಪರ್ಯಾಯ ಮೆರವಣಿಗೆ ಆರಂಭವಾಯಿತು.
ಉಡುಪಿಯ ರಥಬೀದಿಯ ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣದೇವರ ದರ್ಶನಮಾಡಿ ನವಗ್ರಹ ದಾನ ನೀಡಿ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ ದೇವರ ದರ್ಶನ ಪಡೆದು ಅನಂತೇಶ್ವರದಲ್ಲಿ ಶ್ರೀ ಮಧ್ವಾಚಾರ್ಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿ ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಸ್ವಾಗತಿಸಿದರು.ಶ್ರೀಕೃಷ್ಣ ದೇವರ ದರ್ಶನ ಪಡೆದು ಕೃಷ್ಣಾಪುರ ಮಠದ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿ ಚಂದ್ರಶಾಲೆಯಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು. ಮಧ್ವಾಚಾರ್ಯರ ಸನ್ನಿಧಿಯ ಎದುರು ಅದಮಾರು ಮಠಾಧೀಶರು ಕೃಷ್ಣಾಪುರ ಮಠಾಧೀಶರಿಗೆ ಅಕ್ಷಯ ಪಾತ್ರೆ ಹಸ್ತಾಂತರ ಮಾಡಿದರು.ನಂತರ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಚತುರ್ಥ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿದರು.
ಪರ್ಯಾಯ ಶ್ರೀಗಳಿಂದ ಬಡಗುಮಾಳಿಗೆಯ ಅರಳು ಗದ್ದುಗೆಯಲ್ಲಿ ಗಂದಾದ್ಯುಪಚಾರ, ಅಷ್ಟ ಮಠಾಧೀಶರಿಂದ ಪಟ್ಟಕಣಿಕೆ ಹಾಗೂಮಾಲಿಕೆ ಮಂಗಳಾರತಿ ನಡೆಯಿತು.