Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಭಾರತದಲ್ಲಿ ಮುಂದುವರೆದ ಕೊರೋನಾ ಅಬ್ಬರ: ದೇಶದಲ್ಲಿಂದು 3 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, 491 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೋನಾ ಏರಿಳಿತ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕೆಲ ದಿನಗಳಿಂದ ಎರಡೂವರೆ ಲಕ್ಷದ ಅಸುಪಾಸಿನಲ್ಲಿಯೇ ಇದ್ದ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಇಂದು ಮೂರು ಲಕ್ಷವನ್ನೂ ದಾಟಿ ಮುನ್ನುಗ್ಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,17,532 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 491 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 38218773ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,24,051ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,23,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,58,07,029 ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,69,642 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,74,21,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,58,88,47,554 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 9,287ಕ್ಕೆ ಏರಿಕೆ
ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 9,287 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 9,287ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment