ಕ್ರಿಶ್ಚಿಯನ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಉಡುಪಿ : ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್‍ನ ಹಳೆವಿದ್ಯಾರ್ಥಿ ಎಂ. ಗಂಗಾಧರ ರಾವ್ (ನಂದಕುಮಾರ್) ಕಳೆದ 12 ವರ್ಷಗಳಿಂದ ತಾನು ಕಲಿತ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡುತ್ತಾ ಬಂದಿದ್ದು ಈ ವರ್ಷದ ಈ ಕಾರ್ಯಕ್ರಮ 24-01-2022 ರಂದು ಯಕ್ಷಗಾನ ಕಲಾರಂಗದ ಕಛೇರಿಯಲ್ಲಿ ಸಂಪನ್ನಗೊಂಡಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವರಿಷ್ಠರಾದ ಡಾ. ಎಂ. ಮೋಹನ ಆಳ್ವರು 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಶುಭಹಾರೈಸಿದರು. ಯುವಕರು ನಮ್ಮ ಸಂಪತ್ತು ನಿಮ್ಮ ಮುಂದೆ ಅಪೂರ್ವ ಅವಕಾಶಗಳಿವೆ ಅದನ್ನು ಸದುಪಯೋಗಪಡಿಸಿಕೊಂಡು ರಾಷ್ಟ್ರದ ಸಂಪತ್ತಾಗಬೇಕೆಂದು ಹಿತವಚನ ನೀಡಿದರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ನಿವೃತ್ತ ಮುಖ್ಯೋಪಾಧ್ಯಾಯಿನಿ ಹೆಲೆನ್ ವಿಕ್ಟೋರಿಯಾ ಸಾಲಿನ್ಸ್, ಯಕ್ಷಗಾನ ಕಲಾರಂಗದ ಜತೆಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಹೆಚ್.ಎನ್. ಶೃಂಗೇಶ್ವರ ಹಾಗೂ ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.