BREAKING NEWS >
ಕರಾವಳಿಯಲ್ಲಿ ಮು೦ದುವರಿದ ಮಳೆ-ತಗ್ಗು ಪ್ರದೇಶಗಳಲ್ಲಿ ಏರುತ್ತಿರುವ ಮಳೆಯ ನೀರಿನ ಮಟ್ಟ....

ಭಾರತದಲ್ಲಿ ಕೊರೋನಾ 3ನೇ ಅಲೆ ಅಬ್ಬರ: ದೇಶದಲ್ಲಿಂದು 2.86 ಲಕ್ಷ ಹೊಸ ಕೇಸ್ ಪತ್ತೆ, 573 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 573 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,03,71,500ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,91,700ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,99,073 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,73,70,971ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,69,745 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,05,72,178 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,63,84,39,207 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

No Comments

Leave A Comment