Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಮರಕಡ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ನಿಧನ

ಮಂಗಳೂರು:ಮರಕಡ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ಅವರು ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಶ್ರೀ ನರೇಂದ್ರನಾಥ ಸ್ವಾಮೀಜಿಯವರು ಮರಕಡದಲ್ಲಿ ಬೃಹತ್ ಆದಿಶಕ್ತಿ ದೇವಾಲಯವನ್ನು ನಿರ್ಮಿಸಿದ್ದು, ಫೆಬ್ರವರಿ ತಿಂಗಳಲ್ಲಿ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಸಲು ನಿರ್ಧರಿಸಿದ್ದರು.

ಈ ಸಂಬಂಧ ಬುಧವಾರ ಸಂಜೆ ಸಭೆ ನಡೆದಿದ್ದು, ಸ್ವಾಮೀಜಿ ಅವರು ಅಸ್ವಸ್ಥರಾಗಿದ್ದರಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ಇನ್ನು ಸ್ವಾಮೀಜಿ ಅವರ ಹಠಾತ್ ನಿಧನದಿಂದ ಅಪಾರ ಸಂಖ್ಯೆಯ ಶಿಷ್ಯವರ್ಗ ಶೋಕ ಸಾಗರದಲ್ಲಿ ಮುಳುಗಿಸಿದೆ.

No Comments

Leave A Comment