Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉತ್ತರ ಪ್ರದೇಶ ಚುನಾವಣೆ: ಕೇಸರಿ ಪಕ್ಷ ತೊರೆದ ಬಾರಾ ಕ್ಷೇತ್ರದ ಬಿಜೆಪಿ ಶಾಸಕ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರ ಬಾರಾ ಬಿಜೆಪಿ ಶಾಸಕರು ಅಜಯ್ ಕುಮಾರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ಕ್ಷೇತ್ರವನ್ನು ಮಿತ್ರ ಪಕ್ಷದ ಅಭ್ಯರ್ಥಿಗೆ ಬಿಟ್ಟುಕೊಡುವ ಉದ್ದೇಶದ ಬಗ್ಗೆ ತಮಗೆ ಯಾವುದೇ ಮಾಹಿತಿ ನೀಡದಿರುವುದನ್ನು ಖಂಡಿಸಿ ಬುಧವಾರ ಬಿಜೆಪಿ ತೊರೆದಿದ್ದಾರೆ.

ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ತಮ್ಮ ಈ ಕಠಿಣ ನಿರ್ಧಾರಕ್ಕೆ ಕಾರಣವನ್ನು ವಿವರಿಸಿದ ಡಾ. ಅಜಯ್ ಕುಮಾರ್ ಅವರು, ಮಿತ್ರ ಪಕ್ಷ ಅಪ್ನಾ ದಳ(ಎಸ್) ಅಭ್ಯರ್ಥಿಗೆ ಬಾರಾ ಸ್ಥಾನವನ್ನು ಬಿಟ್ಟುಕೊಡುವ ಬಿಜೆಪಿ ನಾಯಕತ್ವದ ಉದ್ದೇಶದ ಬಗ್ಗೆ ನನಗೆ ಯಾವುದೇ ಮಾಹಿತಿ ನೀಡಿಲ್ಲ ಎಂದರು.

“ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಆದರೆ ಅವರ ನಡೆಯಿಂದ ನನಗೆ ನೋವಾಗಿದೆ. ಪಕ್ಷದ ಯಾವುದೇ ಉನ್ನತ ನಾಯಕರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅದರ ಬಗ್ಗೆ ಮಾಹಿತಿ ನೀಡಲಿಲ್ಲ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಇದರಿಂದ ನನಗೆ ತುಂಬಾ ನೋವಾಗಿದೆ ಮತ್ತು ನಾನು ಭಾರವಾದ ಹೃದಯದಿಂದ ಬಿಜೆಪಿಯನ್ನು ತೊರೆಯುತ್ತಿದ್ದೇನೆ. ನಾನು ಬಿಜೆಪಿ ಕಾರ್ಯಕರ್ತ ಮತ್ತು ಶಾಸಕನಾಗಿ ನನಗೆ ವಹಿಸಲಾದ ಎಲ್ಲಾ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ ಅಜಯ್ ಕುಮಾರ್ ಹೇಳಿದ್ದಾರೆ.

ಡಾ ಕುಮಾರ್ ಅವರು 2012 ಮತ್ತು 2017ರ ವಿಧಾನಸಭಾ ಚುನಾವಣೆಯಲ್ಲಿ ಬಾರಾ ಕ್ಷೇತ್ರದಿಂದ ಗೆದ್ದಿದ್ದರು. ಮೊದಲು ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಮತ್ತು ನಂತರ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

No Comments

Leave A Comment