ಟ್ರಕ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ : ಇಬ್ಬರು ವಿದ್ಯಾರ್ಥಿಗಳು ಸಾವು : ಇಬ್ಬರು ಗಂಭೀರ
ಹಾಸನ : ಮೈಸೂರು-ಹಾಸನ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸರಾಮನಹಳ್ಳಿ ಬಳಿ ಸಂಭವಿಸಿದೆ.
ಸಾವನ್ನಪ್ಪಿದ ಯುವಕರು ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳಾದ ಸುಹಾನ್ ಮತ್ತು ಶುಭಂಕರ ಎಂಬವರಿಗೆ ಗಂಭೀರ ಗಾಯಗಳಾಗಿವೆ.ಈ ಇಬ್ಬರು ವಿದ್ಯಾರ್ಥಿಗಳು ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.