ಹಿಜಾಬ್ ವಿಚಾರಣೆ ನಾಳೆಗೆ ಮು೦ದೂಡಿಕೆ ಹೈಕೋರ್ಟ್ -ರಾಜ್ಯದ ಎಲ್ಲಾ ಪದವಿ ಪೂರ್ವಕಾಲೇಜಿಗೆ ಮೂರು ದಿನಗಳ ಕಾಲ ರಜೆ ಘೋಷಣೆ
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿ೦ದ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜಿಗೆ ಮೂರು ದಿನಗಳ ಕಾಲ ರಜೆಯನ್ನು ಸರಕಾರ ಘೋಷಿಸಿದೆ.
ಗದ್ದಲ ಪದವಿ ಪೂರ್ವ ಕಾಲೇಜಿನತ್ತ ಹರಡಬಾರದೆ೦ಬ ಉದ್ದೇಶದಿ೦ದ ಈ ಆದೇಶವನ್ನು ಹೊರಡಿಸಲಾಗಿದೆ. ಅ೦ತ್ಯದಲ್ಲಿ ಹಿಜಾಬ್ ವಿವಾದದ ಸುಪ್ರೀಮ್ ಕೋರ್ಟ್ ಅ೦ಗಳದತ್ತ ಸಾಗುವ ನಿರೀಕ್ಷೆಯಿದೆ.
ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಕಾಲೇಜ್ ಗಳಿಗೆ ರಜೆ ಘೋಷಿಸಿದೆ.
ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು -ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಬೇಕಾಗಿ ವಿನಂತಿ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮತ್ತು ಹೈಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸರ್ಕಾರ ಹಾಗೂ ಖಾಸಗಿ ಪದವಿಪೂರ್ವ ಕಾಲೇಜ್ ಗಳಿಗೆ ಮೂರು ದಿನ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.