ಹಿಜಾಬ್ ವಿವಾದ: ಪ್ರತಿಭಟನಾ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಹಂಚಿಕೆ, ಪೋಷಕರಿಂದ ದೂರು ದಾಖಲು
ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟಿಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ವೈಯುಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿರುವುದಾಗಿ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಸೇರಿದಂತೆ ಅವರ ವೈಯಕ್ತಿಕ ವಿವರಗಳಲ್ಲಿ ಸಾಮಾಜಿಕ ಡೊಮೈನ್ ಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿಯರ ಪೋಷಕರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ .ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿದ್ದಾರೆ.
ದುಷ್ಕರ್ಮಿಗಳು ಈ ವಿವರಗಳನ್ನು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಲು ಬಳಸಿಕೊಳ್ಳುವ ಸಾಧ್ಯತೆಯಿರುವುದಾಗಿ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯರ ಪೋಷಕರು ತಮಗೆ ಲಿಖಿತ ದೂರು ನೀಡಿರುವುದಾಗಿ ವಿಷ್ಣುವರ್ಧನ್ ಹೇಳಿದ್ದಾರೆ.
ಆನ್‌ಲೈನ್‌ನಲ್ಲಿ ಲಭ್ಯವಿರುವ ಮಾಹಿತಿಯ ಸಾಕ್ಷ್ಯಾಧಾರಗಳನ್ನು ಅವರಿಂದ ಕೇಳಲಾಗಿದೆ. ಅದು ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಸ್ ಪಿ ತಿಳಿಸಿದ್ದಾರೆ.