Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಉಡುಪಿ ಶ್ರೀಕೃಷ್ಣಮಠಕ್ಕೆ ಶ್ರೀಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ-ಪರ್ಯಾಯ ಶ್ರೀಗಳಿ೦ದ ಸನ್ಮಾನ

ಶ್ರೀಕೃಷ್ಣಮಠಕ್ಕೆ ಶುಕ್ರವಾರದ೦ದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆಗಮಿಸಿದಾಗ ವಾದ್ಯಘೋಷದೊಂದಿಗೆ ಸ್ವಾಗತಿಸಿ, ಶ್ರೀಮಠದ ದಿವಾನರಾದ ವರದರಾಜ ಭಟ್ ಹಾಗೂ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿದರು. ನಂತರ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಎಚ್ ಮಂಜುನಾಥ್, ಜಿಲ್ಲಾ ನಿರ್ದೇಶಕ ಗಣೇಶ್, ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್, ಆಪ್ತಕಾರ್ಯದರ್ಶಿ ವೀರು ಶೆಟ್ಟಿ, ವಿಷ್ಣು ಪಾಡಿಗಾರ್, ವಾಸುದೇವ ಪೆರಂಪಳ್ಳಿ, ಮುರಳಿ ಕಡೆಕಾರ್, K. ಗಣೇಶ್ ರಾವ್, ಗಂಗಾಧರ್ ರಾವ್, ಉಡುಪಿ ರಥಬೀದಿಯ ಶ್ರೀಮ೦ಜುನಾಥ ಇಲೆಕ್ಟ್ರಿಕಲ್ಸ್ ನ ಮಾಲಿಕರಾದ ರಾಜೇಶ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment