Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

‘ಗೊಮ್ಮಟೇಶ್ವರನಿಗೆ’ ಚಡ್ಡಿ ಹಾಕಿಸಿ: ಅವಹೇಳನಕಾರಿ ಹೇಳಿಕೆ ನೀಡಿದ್ದ ಅಯೂಬ್ ಖಾನ್ ಬಂಧನ

ಮೈಸೂರು: ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದಿ ಇಂಡಿಯನ್‌ ನ್ಯೂ ನ್ಯಾಷನಲ್‌ ಪಾರ್ಟಿ ಅಧ್ಯಕ್ಷ ಅಯೂಬ್‌ ಖಾನ್‌ ಅವರನ್ನು ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಯೂಬ್‌ ಖಾನ್‌ ವಿರುದ್ಧ ದಿಗಂಬರ ಜೈನ ಸಮಾಜ ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ದೂರು ನೀಡಿತ್ತು. ಗೊಮ್ಮಟೇಶ್ವರ ಕುರಿತು ಅವ ಹೇಳನಕಾರಿ ಹೇಳಿಕೆ ನೀಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೂಬ್‌ ಖಾನ್‌ ವಿರುದ್ಧ 295 ಎ ಅಡಿ ಪ್ರಕರಣ ದಾಖಲಿಸಿದ್ದರೆ. ಸುದ್ದಿ ಪ್ರಸಾರ ಮಾಡಿದ ಖಾಸಗಿ ವಾಹಿನಿ ಮುಖ್ಯಸ್ಥ ವಿರುದ್ಧ 505,(2) ಅಡಿ ಪ್ರಕರಣ ದಾಖಲಿಸಿದ್ದಾರೆ.

ಬಂಧನದ ಬಳಿಕ ಅಯೂಬ್ ನನ್ನು ಮೈಸೂರಿನ 2ನೇ ಜೆಎಂಎಫ್ಸಿ ಕೋರ್ಟ್ ಜಡ್ಜ್  ಮುಂದೆ ಹಾಜರುಪಡಿಸಿದ್ದು, ಫೆಬ್ರವರಿ 25ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.

ನಿಮಗೇನಾದರೂ ಈ ದೇಶದ ಮೇಲೆ ಅನುಕಂಪ ಇದ್ದರೆ ಮೊದಲು ಅಶ್ಲೀಲವಾಗಿ ನಿಂತಿರತಕ್ಕಂತ ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

No Comments

Leave A Comment