ಕೆಂಪು ಕೋಟೆ ಮೇಲೆ ಸಿಖ್ ಬಾವುಟ ಹಾರಿಸಿದ್ದ ನಟ ದೀಪ್ ಸಿಧು ಭೀಕರ ರಸ್ತೆ ಅಪಘಾತದಲ್ಲಿ ಮೃತ್ಯು
ದೆಹಲಿ : ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಸಿಖ್ ಬಾವುಟ ಹಾರಿಸಿದ್ದ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಟ ದೀಪ್ ಅವರ ಸ್ಕಾರ್ಪಿಯೋ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಿಂದ ಸಿಧು ಗಂಭೀರ ಗಾಯಗೊಂಡಿದ್ದರು,ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ದೀಪ್ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸಿಧು ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋನೆಪತ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ . ವಾಹನದಲ್ಲಿದ್ದ ಮಹಿಳೆಯೊಬ್ಬರು ಅಪಘಾತದಿಂದ ಪಾರಾಗಿದ್ದಾರೆ ಎಂದು ತಿಳಿಯಲಾಗಿದೆ.