21 ವರ್ಷದ ದೈಹಿಕ ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ ಕಿಡಿಗೇಡಿ: ಮಹಿಳೆ ಸಾವು!
ಹೈದರಾಬಾದ್: ನಾರಾಯಣಪೇಟೆ ಜಿಲ್ಲೆಯಲ್ಲಿ 21 ವರ್ಷದ ದೈಹಿಕ ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ನಂತರ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ.
ಸಂತ್ರಸ್ತೆಯ ಆಪಾದಿತ ಗೆಳೆಯ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಸುಟ್ಟು ಹಾಕಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಶುಕ್ರವಾರ ತಡರಾತ್ರಿ ಆಕೆಯನ್ನು ಅಪರಿಚಿತ ವ್ಯಕ್ತಿಗಳು ಮೆಹಬೂಬ್‌ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಸುಟ್ಟಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಇಂದು ಬೆಳಗ್ಗೆ ಮೃತಪಟ್ಟಿದ್ದಾಳೆ.
ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ನಾರಾಯಣಪೇಟೆ ಜಿಲ್ಲೆಯ ಕೋಸ್ಗಿ ವೃತ್ತ ನಿರೀಕ್ಷಕ ಜಿ ಜನಾರ್ದನಗೌಡ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮೃತ ಸಂತ್ರಸ್ತೆ ಮದ್ದೂರು ಮಂಡಲದ ತಿಮ್ಮರೆಡ್ಡಿ ಪಲ್ಲಿ ಗ್ರಾಮದವರು. ಕಳೆದ ಕೆಲವು ತಿಂಗಳಿಂದ ನಗರದ ರಾಜೇಂದ್ರನಗರದಲ್ಲಿ ಮಲತಾಯಿಯೊಂದಿಗೆ ವಾಸವಾಗಿದ್ದಳು. ಆಕೆ ದೈಹಿಕವಾಗಿ ವಿಕಲಚೇತನಳಾಗಿದ್ದರಿಂದ ಮನೆಯಲ್ಲೇ ಇದ್ದಳು ಮತ್ತು ದೈಹಿಕವಾಗಿ ನ್ಯೂನತೆ ಹೊಂದಿರುವ ತನ್ನ ಕಿರಿಯ ಮಲತಾಯಿಯನ್ನು ಸಹ ನೋಡಿಕೊಳ್ಳುತ್ತಿದ್ದಳು. ಆಕೆಯ ತಂದೆ ಮತ್ತು ಮಲತಾಯಿ ದಿನಗೂಲಿ ಕೆಲಸ ಮಾಡುತ್ತಿದ್ದರು.
ಫೆಬ್ರವರಿ 13ರಂದು ರಾತ್ರಿ ಸಂತ್ರಸ್ತೆ ಮನೆಯಿಂದ ನಾಪತ್ತೆಯಾಗಿದ್ದು, ಆಕೆಯ ನಾಪತ್ತೆಯ ಹಿಂದೆ ಆಕೆಯ ಪ್ರಿಯಕರ ವೆಂಕಟರಾಮ್ ಪಾತ್ರವಿದೆ ಎಂದು ಆರೋಪಿಸಿ ಆಕೆಯ ಕುಟುಂಬವು ರಾಜೇಂದ್ರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ನಂತರ ನಾಪತ್ತೆ ಪ್ರಕರಣ ದಾಖಲಾಗಿದ್ದು, ಮಹಿಳೆಯ ಪತ್ತೆಗೆ ಹುಡುಕಾಟ ನಡೆದಿತ್ತು.
ಈ ಮಧ್ಯೆ ಶುಕ್ರವಾರ ಆಕೆಯನ್ನು ಅಪರಿಚಿತ ವ್ಯಕ್ತಿಯೊಬ್ಬರು ಮಹಬೂಬ್‌ನಗರ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಮದ್ದೂರು ಪೇಟೆಯಲ್ಲಿ ಆಕೆಯನ್ನು ಸುಟ್ಟುಹಾಕಿ ಬಿಟ್ಟು ಹೋಗಿರುವ ವಿಷಯ ತಿಳಿದ ಆಸ್ಪತ್ರೆ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ಆರಂಭಿಸಿದ್ದರು. ಆದರೆ, ಶನಿವಾರ ಆಕೆ ಸಾವನ್ನಪ್ಪಿದ್ದಾಳೆ. ಆಕೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಆಕೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವುದು ಕಂಡುಬಂದಿದೆ