Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಶಿವಮೊಗ್ಗ: ನಗರದಲ್ಲಿ ಕಳೆದ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು ಬೆಳಗ್ಗೆಯಿಂದ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಖುದ್ದು ನಾನೇ ರಸ್ತೆಗಳಿದು ಪರಿಶೀಲನೆ ಮಾಡುತ್ತಿದ್ದೇನೆ. ಶಾಂತಿ ಕಾಪಾಡಲು ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇಬ್ಬರನ್ನು ಬಂಧಿಸಿದ್ದು ಇನ್ನುಳಿದವರಿಗಾಗಿ ಬಲೆ ಬೀಸಿದ್ದು, ಶೀಘ್ರವೇ ಬಂಧಿಸುತ್ತೇವೆ ಎಂದರು.

ಸ್ಥಳದಲ್ಲಿ ಪೊಲೀಸರು, ಆರ್ ಎಎಫ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಆಸ್ತಿ, ಪಾಸ್ತಿ ಹಾನಿ ಮಾಡಿದವರ ಮೇಲೆ ಪ್ರತ್ಯೇಕ ಕೇಸು ಹಾಕಲಾಗುವುದು ಎಂದರು.

ಹರ್ಷನ ತಾಯಿಯಿಂದ ಕೇಸು ದಾಖಲು: ಕೊಲೆಗೀಡಾದ ಹರ್ಷ ಅವರ ತಾಯಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.

No Comments

Leave A Comment