
ವಿಂಡೀಸ್ ವಿರುದ್ಧ ಕ್ಲೀನ್ ಸ್ವೀಪ್: ಟಿ20ಯಲ್ಲಿ ಅಗ್ರ ಸ್ಥಾನಕ್ಕೇರಿದ ಟೀಂ ಇಂಡಿಯಾ
ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲೂ ಗೆಲುವು ಸಾಧಿಸಿ ಕ್ಲೀನ್ ಸ್ವೀಪ್ ಸರಣಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಇದೀಗ ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದೆ.
ಹೌದು. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ತಾಜಾ ಟ್ವೆಂಟಿ-20 ತಂಡಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡನನ್ನು ಹಿಂದಿಕ್ಕಿರುವ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.
ಇತ್ತೀಚೆಗೆ ಈಡನ್ ಗಾರ್ಡನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 17 ರನ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತ್ತು. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡವು ವಿಂಡೀಸ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿಗಳಲ್ಲಿ ವೈಟ್ ವಾಶ್ ಸಾಧನೆಗೈದಿದೆ.