Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಬಂಧನ

ಮುಂಬೈ: ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಿದೆ.

ಜಾರಿ ನಿರ್ದೇಶನಾಲಯ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ನವಾಬ್ ಮಲಿಕ್ ಅವರು ಇಂದು ಬೆಳಗ್ಗೆ 8 ಗಂಟೆಗೆ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದರು. ವಿಚಾರಣೆ ಬಳಿಕ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ  ಮಹಾ ಸಚಿವನನ್ನು ಬಂಧಿಸಿದೆ.

ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟು, ಭೂಗತ ಜಗತ್ತಿನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಫೆಬ್ರವರಿ 15 ರಂದು ನವಾಬ್ ಮಲಿಕ್ ವಿರುದ್ಧ ಮುಂಬೈನಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಇಡಿ ಈ ಕ್ರಮ ಕೈಗೊಂಡಿದೆ.

1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಪರಾರಿಯಾಗಿರುವ ಗ್ಯಾಂಗ್ ಸ್ಟರ್ ದಾವೂದ್ ಇಬ್ರಾಹಿಂ ಅವರ ಮೃತ ಸಹೋದರಿ ಹಸೀನಾ ಪಾರ್ಕರ್, ಸಹೋದರ ಇಕ್ಬಾಲ್ ಕಸ್ಕರ್ ಮತ್ತು ದರೋಡೆಕೋರ ಛೋಟಾ ಶಕೀಲ್ ನ ಸೋದರ ಮಾವ ಸಲೀಂ ಖುರೇಷಿ ಅಲಿಯಾಸ್ ಸಲೀಂ ಸೇರಿದಂತೆ 10 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈಗಾಗಲೇ ಜೈಲಿನಲ್ಲಿದ್ದ ಕಸ್ಕರ್ ನನ್ನು ಕಳೆದ ವಾರ ಏಜೆನ್ಸಿ ಬಂಧಿಸಿತ್ತು.

No Comments

Leave A Comment