Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬಿಬಿಎಂಪಿ ಕಚೇರಿಗಳ ಮೇಲೆ ಏಕಕಾಲಕ್ಕೆ ಎಸಿಬಿ ದಾಳಿ: ಪರಿಶೀಲನೆ

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿ ಮೇಲೆ ಶುಕ್ರವಾರ ಎಸಿಬಿ ಅಧಿಕಾರಿಗಳ 8 ತಂಡಗಳು ಏಕಕಾಲಕ್ಕೇ ದಾಳಿ ನಡೆಸಿದ್ದು, ಕಡತಗಳ ಪರಿಲಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನಾ ಕೇಂದ್ರ ಕಚೇರಿ ಸೇರಿ ಎಲ್ಲಾ 8 ವಲಯಗಳ ಮೇಲೂ ಎಸಿಬಿ ದಾಳಿ ಮಾಡಿದೆ. ತೀವ್ರ ಶೋಧ ಕಾರ್ಯ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

ಸಾರ್ವಜನಿಕರ ಸೋಗಿನಲ್ಲಿ ಬಿಬಿಎಂಪಿ ಕಚೇರಿಗೆ ನುಗ್ಗಿ ಎಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ರಾಜಕಾಲುವೆ, ಜಾಹೀರಾತು, ಆರೋಗ್ಯ ವಿಭಾಗ ಸೇರಿದಂತೆ ಇತರೆ ವಿಭಾಗಗಳ ಮೇಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ಕಚೇರಿ ಮೇಲೂ ದಾಳಿ ನಡೆದಿದೆ.

ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ನಾಲ್ವರು ಎಸ್​ಪಿಗಳು, ಡಿವೈಎಸ್​ಪಿಗಳು, ಇನ್ಸ್​ಪೆಕ್ಟರ್​ಗಳು ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ಸಾರ್ವಜನಿಕರ ಸೋಗಿನಲ್ಲಿ ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಬೃಹತ್ ಭ್ರಷ್ಟಾಚಾರ ಆರೋಪವೊಂದು ಈ ಹಿಂದೆ ಕೇಳಿ ಬಂದಿತ್ತು. ಬ್ರೋಕರ್‌ಗಳ ಜತೆ ಶಾಮೀಲಾಗಿ ಸರ್ಕಾರಿ ಆಸ್ತಿ ಗೋಲ್‌ಮಾಲ್ ನಡೆದಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಎಸಿಬಿ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.

No Comments

Leave A Comment