Log In
BREAKING NEWS >
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌...

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲ್ ಸಾವು!

ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ವಿವಿಧ ಭದ್ರತಾ ಪಡೆಗಳ ಜಂಟಿ ತಂಡವು ಬೆಳಗ್ಗೆ 6 ಗಂಟೆ ಸುಮಾರಿಗೆ ನೈಮೇದ್ ಪೊಲೀಸ್ ಠಾಣೆ ವ್ಯಾಪ್ತಿಯ ಜಬೇಲಿ ಗ್ರಾಮದ ಬಳಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜಿಲ್ಲಾ ರಿಸರ್ವ್ ಗಾರ್ಡ್(ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಗೆ ಸೇರಿದ ಸಿಬ್ಬಂದಿ ಶನಿವಾರ ರಾತ್ರಿ ರಾಜ್ಯ ರಾಜಧಾನಿ ರಾಯ್‌ಪುರದಿಂದ 450 ಕಿಮೀ ದೂರದಲ್ಲಿರುವ ಜಬೇಲಿ, ದುರ್ಧಾ ಮತ್ತು ಮೊಸ್ಲಾ ಗ್ರಾಮಗಳ ಕಡೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಭಾನುವಾರ ಬೆಳಿಗ್ಗೆ, ಗಸ್ತು ತಿರುಗುವ ತಂಡವು ಶಸ್ತ್ರಸಜ್ಜಿತ ನಕ್ಸಲರ ಗುಂಪಿನೊಂದಿಗೆ ಮುಖಾಮುಖಿಯಾಗಿದ್ದು ಗುಂಡಿನ ದಾಳಿ ನಡೆದಿತ್ತು ಎಂದು ಅವರು ಹೇಳಿದರು.

ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರ ದೇಹಗಳನ್ನು 12 ಬೋರ್ ಗನ್, 9 ಎಂಎಂ ಪಿಸ್ತೂಲ್, ಕಾರ್ಡೆಕ್ಸ್ ವೈರ್, ಸ್ಫೋಟಕ ವಸ್ತುಗಳು ಮತ್ತು ಇತರ ಮಾವೋವಾದಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

No Comments

Leave A Comment