Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾದಲ್ಲೂ ವಿರೋಧ: ಸುಮಾರು 3 ಸಾವಿರ ಪ್ರತಿಭಟನಾಕಾರರ ಬಂಧನ

ಮಾಸ್ಕೋ: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಧೋರಣೆ ವಿರುದ್ಧ ರಷ್ಯಾದಲ್ಲಿಯೂ ಭಾರೀ ವಿರೋಧ ವ್ಯಕ್ತವಾಗಿದೆ. ಕಳೆದ ಮೂರು ದಿನಗಳಿಂದ ಯುದ್ಧ ವಿರೋಧಿ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 3 ಸಾವಿರ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಕಳೆದ ಮೂರು ದಿನಗಳ ಅವಧಿಯಲ್ಲಿ ರಷ್ಯಾದ ವಿವಿಧೆಡೆ ಯುದ್ಧ ವಿರೋಧಿ ಪ್ರತಿಭಟನೆಯಲ್ಲಿ ತೊಡಗಿದ್ದ ಸುಮಾರು 3,093 ಜನರನ್ನು ಬಂಧಿಸಲಾಗಿದೆ ಎಂದು ಪರಿಸ್ಥಿತಿಯನ್ನು ನಿಭಾಯಿಸುತ್ತಿರುವ ಗ್ರೂಪ್ ಒಂದು ಟ್ವೀಟ್ ಮಾಡಿದೆ.

ಫೆಬ್ರವರಿ 24 ರಂದು 1,967 ಜನರನ್ನು ಪೊಲೀಸರು ಬಂಧಿಸಿದ್ದರು. ಫೆಬ್ರವರಿ 25 ರಂದು 634 ಮತ್ತು ಫೆಬ್ರವರಿ 26 ರಂದು 492 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಗ್ರೂಪ್ ಮಾಹಿತಿ ನೀಡಿದೆ.

ರಷ್ಯಾದ ನಗರಗಳಲ್ಲಿ ಪ್ರತಿಭಟನೆ ಕಾಣಬಹುದಾಗಿದೆ. ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದ್ದಾರೆ.

No Comments

Leave A Comment