Log In
BREAKING NEWS >
ಉಡುಪಿ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಕಾಂಕ್ರೀಟಿಕರಣ ಹಿನ್ನಲೆ : 45 ದಿನ ಘನ ವಾಹನ ಸಂಚಾರಕ್ಕೆ ನಿಷೇಧ- ಡಿಸಿ ಆದೇಶ...

ಚಿತ್ರದುರ್ಗದಲ್ಲಿ ಭೀಕರ ಅಪಘಾತ: 2 ಸಾವು, 10 ಮಂದಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸೋಮವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ ಪಟ್ಟು 10 ಮಂದಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಸಮೀಪದ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರಲ್ಲಿ ಒಬ್ಬರನ್ನು ಶ್ವೇತಾ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹತ್ತು ಜನರು ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೊ ಗೋಕರ್ಣದಿಂದ ಬೆಂಗಳೂರು ಕಡೆ ಸಾಗುವಾಗ ಈ ಅವಘಡ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment