Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ

ಶಾಹೀದ್ ಭಗತ್ ಸಿಂಗ್ ನಗರ್: ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಎಎಪಿ ಪಕ್ಷದ ಭಗವಂತ್‌ ಮಾನ್ ಅವರು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹುಟ್ಟೂರಾದ ಖಟ್ಕರ್ ಕಲಾನ್​​ನಲ್ಲಿ 18ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಸದ್ಯ ಭಗವಂತ್ ಮಾನ್​ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್​​ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪಂಜಾಬ್​​ನ ಖಟ್ಕರ್​ಕಲಾನ್​ನಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಪಂಜಾಬ್​ ನೂತನ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರಿಗೆ, ಕಾಂಗ್ರೆಸ್ ನಾಯಕ ಮನೀಶ್​ ತಿವಾರಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್​ ಯಾದವ್​,  ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಸೇರಿ ಅನೇಕರು ಶುಭಹಾರೈಸಿದರು.

ಅಖಿಲೇಶ್ ಯಾದವ್ ಟ್ವೀಟ್ ಮಾಡಿ, ಪಂಜಾಬ್​​ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಅಭಿನಂದನೆಗಳು. ಅವರ ಸಮರ್ಥ ನಾಯಕತ್ವದಲ್ಲಿ ಪಂಜಾಬ್​​ ಪ್ರಗತಿ ಕಾಣಲಿ. ಅಲ್ಲಿ ಸೋದರತ್ವ ಬೆಳೆಯಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

No Comments

Leave A Comment