Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 94ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ದೀಪ ಪ್ರಜ್ವಲನೆಯೊ೦ದಿಗೆ ವಿದ್ಯುಕ್ತ ಚಾಲನೆ.......ಡಿ.2ರ ಶುಕ್ರವಾರದ೦ದು ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಬಾಳೆಮುಹೂರ್ತ ಕಾರ್ಯಕ್ರಮವು 8ಗ೦ಟೆಗೆ ಪುತ್ತಿಗೆ ಮಠದ ಆವರಣದಲ್ಲಿ ಜರಗಲಿದೆ...

ಪ್ರಾಂಶುಪಾಲ, ರಂಗನಟ, ಸಾಹಿತಿ ಮೇಟಿ ಮುದಿಯಪ್ಪ ನಿಧನ

ಉಡುಪಿ : ನಿವೃತ್ತ ಪ್ರಾಂಶುಪಾಲ, ರಂಗನಟ, ಸಾಹಿತಿ ಮೇಟಿ ಮುದಿಯಪ್ಪ (66) ನಿನ್ನೆ (17-03-2022) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಉಡುಪಿಯ ಹಲವಾರು ಸಾಂಸ್ಕೃ೦ತಿಕ,  ಸಾಮಾಜಿಕ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಉಡುಪಿಯ ರಂಗಭೂಮಿಯ ಜತೆ ಕಾರ್ಯದರ್ಶಿಯಾಗಿದ್ದ ಇವರು, ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಹಲವಾರು ಕವನ ಸಂಕಲನಗಳು ಪ್ರಕಟಗೊಂಡಿವೆ. ಪತ್ನಿ, ಈರ್ವರು ಪುತ್ರರು ಹಾಗೂ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

No Comments

Leave A Comment