ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ 3ವರು ಸಜೀವ ದಹನ, ನಾಲ್ಕು ಮ೦ದಿ ಗಂಭೀರ
ಕಾಪು:ಮಾ,21: ಕಾಪು ಸಮೀಪದ ಫಕೀರ್ನಕಟ್ಟೆಯಲ್ಲಿನ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡ ಪರಿಣಾಮ ಮೂರು ಮ೦ದಿ ಸಜೀವ ದಹನ ಗೊಂಡ ದಾರುಣ ಘಟನೆ ಇ೦ದು ಸೋಮವಾರ (ಮಾ 21ರ) ಬೆಳಗ್ಗೆ ನಡೆದಿದೆ.
ರಜಾಕ್ ಮಲ್ಲಾರ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.