Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಕನ್ನರ್ಪಾಡಿ:ಶ್ರೀಜಯದುರ್ಗಾಪರಮೇಶ್ವರಿ ದೇವಸ್ಥಾನದ ” ಅಷ್ಟಬಂಧ ಬ್ರಹ್ಮಕುಂಭಾಭಿಷೇಕ”ದ ಆಮ೦ತ್ರಣ ಪತ್ರಿಕೆ ಬಿಡುಗಡೆ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಕನ್ನರ್ಪಾಡಿ ಕಿನ್ನಿಮುಲ್ಕಿ ಉಡುಪಿ ಇಲ್ಲಿನ ಶ್ರೀ ದೇವಿಯ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ಪ್ರಯುಕ್ತ ಇದೇ ಬರುವ 2022 ಮಾರ್ಚ್ 31 ರಿಂದ ಏಪ್ರಿಲ್ 10 ರವರೆಗೆ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯನ್ನು ಶ್ರೀ ದೇವಳದ ವಠಾರದಲ್ಲಿ ನಡೆಸಲಾಯಿತು, ಹಾಗೂ ಬ್ರಹ್ಮಕುಂಭಾಭಿಷೇಕ ದ ಆಮಂತ್ರಣ ಪತ್ರಿಕೆಯನ್ನು ಶ್ರೀದೇವಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಆಡಳಿತಾಧಿಕಾರಿ ಡಾಕ್ಟರ್ ರೋಷನ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ ಕೃಷ್ಣಮೂರ್ತಿ ಆಚಾರ್ಯ , ಪ್ರಧಾನ ಕಾರ್ಯದರ್ಶಿ ಸಂಜೀವ ಎ ,ದೇವಸ್ಥಾನದ ಅರ್ಚಕರಾದ ಗುರುರಾಜ ಉಪಾಧ್ಯಾಯ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ನಾರಾಯಣರಾವ್, ಕನ್ನರ್ಪಾಡಿ ಕಿನ್ನಿಮೂಲ್ಕಿ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಸುರೇಶ್ ರಾವ್, ಕಡೆಕಾರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ನವೀನ್ ಶೆಟ್ಟಿ, ಸಮಿತಿಯ ಸದಸ್ಯರಾದ ಭಾಸ್ಕರ ಸುವರ್ಣ, ಪರಮೇಶ್ವರ್ ಹಾಗೂ ಊರಿನ ಹಿರಿಯರು, ಭಕ್ತಾದಿಗಳು ಉಪಸ್ಥಿತರಿದ್ದರು.

No Comments

Leave A Comment