ಸೋಮಶೇಖರ್ ಭಟ್ – ಕುಟುಂಬದವರಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾ೦ತರ
ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸೋಮಶೇಖರ್ ಭಟ್ ಹಾಗೂ ಕುಟುಂಬದವರು ಡಯಾಲಿಸಿಸ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದು, ದಿನಾಂಕ 31-03-2022 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಉದ್ಘಾಟಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ದಾನಿಗಳು, ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲದ ಪಾಲುದಾರರಾದ Mವಿಶ್ವನಾಥ್ ಭಟ್, M ವಲ್ಲಭ ಭಟ್, M ವಾಮನ್ ಭಟ್ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.