Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕೋಲಾರದ ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ, ಬೆಂಕಿ: 6 ಮಂದಿ ಶಂಕಿತರು ಖಾಕಿ ವಶ

ಕೋಲಾರ: ಶ್ರೀರಾಮ ನವಮಿ ಅಂಗವಾಗಿ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಅದ್ಧೂರಿಯಾಗಿ ನಡೆದ ಹಿಂದೂ ಶೋಭಾಯಾತ್ರೆ ಹಿಂಸಾಚಾರಕ್ಕೆ ತಿರುಗಿದ ಪ್ರಸಂಗ ಕಳೆದ ರಾತ್ರಿ ನಡೆದಿದ್ದು ಘರ್ಷಣೆ, ಕಲ್ಲು ತೂರಾಟಕ್ಕೆ ಕಾರಣವಾದ 6 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶ್ರೀರಾಮನವಮಿ ನಾಳೆ ಇರುವ ಹಿನ್ನೆಲೆಯಲ್ಲಿ ಮುಳಬಾಗಿಲಿನಲ್ಲಿ ಹಿಂದೂಪರ ಸಂಘಟನೆಗಳು ಶೋಭಾಯಾತ್ರೆಯನ್ನು ಆಯೋಜಿಸಿದ್ದವು. ಅದ್ಧೂರಿಯಾಗಿ ನಡೆಯುತ್ತಿದ್ದ ಶೋಭಾಯಾತ್ರೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ ಪರಿಣಾಮ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೊಬೈಲ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇತರ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ.

ನಡೆದಿದ್ದೇನು?: ಲವಕುಶ ಜನ್ಮಭೂಮಿ ಪುಣ್ಯಕ್ಷೇತ್ರ ಟ್ರಸ್ಟ್ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಅದ್ಧೂರಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರ ಮೊದಲ ದಿನದ ಅಂಗವಾಗಿ ಶ್ರೀರಾಮನ ಶೋಭಾಯಾತ್ರೆ ಮುಳಬಾಗಿಲು ಪಟ್ಟಣದಲ್ಲಿ ನಡೆಯುತ್ತಿತ್ತು. ನಿನ್ನೆ ಅಪರಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಶೋಭಾಯಾತ್ರೆ ಮುಳಬಾಗಿಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತಿತ್ತು. ಶೋಭಾಯಾತ್ರೆ ಸಂಜೆ 7.30ರ ಸುಮಾರಿಗೆ ಮುಳಬಾಗಿಲು ಪಟ್ಟಣದ ಜಹಂಗೀರ್ ಸರ್ಕಲ್ ಬಳಿ ಬರುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ರಸ್ತೆಯಲ್ಲಿ ಕತ್ತಲು ಆವರಿಸುತ್ತಿದ್ದ ಕೆಲವೇ ಕ್ಷಣಗಳಲ್ಲಿ ಶೋಭಾಯಾತ್ರೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೂಡಲೇ ಅಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಯಿತು. ಕೆಲವರು ಕಲ್ಲು ತೂರಾಟ ನಡೆಸಿದವರ ಮೇಲೆ ಪ್ರತಿಯಾಗಿ ಕಲ್ಲು ತೂರಲು ಆರಂಭಿಸಿ ಈ ವೇಳೆ ಪರಿಸ್ಥಿತಿಯಲ್ಲಿ ನಿಯಂತ್ರಿಸಿಲು ಪೊಲೀಸರ ಲಾಠಿ ಚಾರ್ಜ್ ಮಾಡಿದ್ದಾರೆ.

ಶೋಭಾಯಾತ್ರೆ ಸಾಗುತ್ತಿದ್ದ ರಸ್ತೆಯಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದೇ ಮತ್ತೆ ವಿದ್ಯುತ್ ಬರುವಷ್ಟರಲ್ಲಿ ಶಾಂತವಾಗಿದ್ದ ಶೋಭಾಯಾತ್ರೆಯಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ ಹೋಗಿತ್ತು. ರಸ್ತೆ ಬಳಿ ಇದ್ದ ಜನರೆಲ್ಲಾ ಅಂಗಡಿಗಳನ್ನು ಬಂದ್ ಮಾಡಿ, ಕೆಲವು ಕಿಡಿಗೇಡಿಗಳು ರಸ್ತೆ ಬಳಿ ಇದ್ದ ಬೈಕ್‍ವೊಂದಕ್ಕೆ ಬೆಂಕಿ ಹಚ್ಚಿದ್ದಾರೆ. ರಸ್ತೆ ಬದಿ ಇದ್ದ ಕೆಲವು ಕಾರ್‍ಗಳ ಮೇಲೆ ಪೊಲೀಸರ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿದ್ದಾರೆ. ಕ್ಷಣದಲ್ಲಿ ಎರಡು ಕೋಮಿನ ಜನರ ನಡುವೆ ಸಂಘರ್ಷಕ್ಕೆ ದಾರಿ ಮಾಡುವ ಸಾಧ್ಯತೆ ಇದ್ದ ಹಿನ್ನೆಲೆ ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು ಜನರನ್ನು ಚದುರಿಸಿದ್ದಾರೆ.

ಶೋಭಾಯಾತ್ರೆ ಹಿನ್ನೆಲೆ ಈಗಾಗಲೇ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದ ಪರಿಣಾಮ ಪರಿಸ್ಥಿತಿಯನ್ನು ತಹಬದಿಗೆ ತರಲಾಯಿತು. ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿ ಶೋಭಾಯಾತ್ರೆಯನ್ನು ಮುಂದುವರೆಯಲು ಅನುವು ಮಾಡಿಕೊಟ್ಟಿದ್ದಾರೆ. ಮುಳಬಾಗಿಲು ತಾಲೂಕು ಆವನಿ ಗ್ರಾಮಕ್ಕೆ ತಲುಪಬೇಗಿದ್ದ ಶೋಭಾಯಾತ್ರೆ ತಲುಪಿದೆ.

ಸ್ಥಳದಲ್ಲಿ ಬಿಗಿ ಭದ್ರತೆ: ಘಟನೆ ಬಳಿಕ ಮುಳಬಾಗಿಲು ತಾಲ್ಲೂಕಿನಲ್ಲಿ ತೀವ್ರ ಬಂದೋಬಸ್ತ್ ಏರ್ಪಡಿಸಲಾಗಿದೆ. 6 ಡಿಎಆರ್, 2 ಕೆಎಸ್ಆರ್ ಪಿ ತುಕಡಿ, 6 ಪಿಐ, ಇಬ್ಬರು ಡಿವೈಎಸ್ಪಿ ಮತ್ತು ಕೋಲಾರ ಎಸ್ ಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

No Comments

Leave A Comment