ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆ
ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗಾವಿಯ ಸಂತೋಷ್ ಪಾಟೀಲ್ ಉಡುಪಿಯ ಶಾ೦ಭವಿ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಯಲಾಗಿದೆ.
ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್ ಆ್ಯಪ್ ಮೆಸೇಜ್ ಕಳುಹಿಸಿ ಸಂತೋಷ್ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರ ಸಂತೋಷ್ ಪತ್ರ ಬರೆದಿದ್ದ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿತ್ತು.
ಈಗ ಸಂತೋಷ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಆದರೆ ಇವರ ಈ ಸಾವು ಸಾರ್ವಜನಿಕ ವಲಯದಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ.
ಉಡುಪಿ ಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಮು೦ದುವರಿಸಿದ್ದಾರೆ.