Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಬಿಗಿಪಟ್ಟು: ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರನ್ನು ಸಂಪುಟದಿಂದ ಕೈಬಿಟ್ಟು ಬಂಧಿಸುವಂತೆ ಆಗ್ರಹಿಸುವ ಕಾಂಗ್ರೆಸ್ ನಾಯಕರ ಬಿಗಿಪಟ್ಟು ಹೆಚ್ಚಾಗಿದೆ. ಇಂದು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾವು ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅವರ ಬಂಧನವಾಗುವವರೆಗೆ ಹಾಗೂ ಸಂತೋಷ್ ಪಾಟೀಲ್ ಕುಟಂಬಸ್ಥರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದರು.

ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಪ್ರಿಯಾಂಕ ಖರ್ಗೆ , ಕೆಜೆ ಜಾರ್ಜ್ ಸೇರಿದಂ ತೆ 20 ನಾಯಕರ ನಿಯೋಗ ರಾಜಭವನಕ್ಕೆ ಭೇಟಿಕೊಟ್ಟು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.

ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ದೇಶದಲ್ಲಿ ಕರ್ನಾಟಕಕ್ಕೆ ಇದೊಂದು ಕಪ್ಪು ಚುಕ್ಕೆ. ಮೊದಲು ಆರೋಪಿಗಳನ್ನು ಬಂಧಿಸಬೇಕೆಂದು ಡಿಕೆಶಿ ಒತ್ತಾಯಿಸಿದ್ದಾರೆ.

ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಕಮಿಷನ್ ಬಗ್ಗೆ ಚರ್ಚೆ ಗೆ ಮನವಿಮಾಡಿದ್ದೆವು. ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಆಗ ಚರ್ಚೆಗೆ ಅವಕಾಶ ನೀಡಿದ್ದರೆ ಇಂದು ಆತ್ಮಹತ್ಯೆ ಆಗ್ತಿರಲಿಲ್ಲ. ಗುತ್ತಿಗೆದಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪಮಾಡಿ ಆತ್ಮಹತ್ಯೆಮಾಡಿಕೊಂಡಿದ್ದಾನೆ. ಭ್ರಷ್ಟಾಚಾರದ ಬಗ್ಗೆಯೂ ತನಿಖೆಯಾಗಬೇಕು. ಈ ಹೋರಾಟವನ್ನು ಕಾಂಗ್ರೆಸ್ ಪಕ್ಷ ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಜನರ ಪರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

No Comments

Leave A Comment