Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ದೇಶಾದ್ಯಂತ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ: ಗಣ್ಯರಿಂದ ಸಂವಿಧಾನ ಶಿಲ್ಪಿಯ ಸ್ಮರಣೆ

ನವದೆಹಲಿ/ ಬೆಂಗಳೂರು: ದೇಶಾದ್ಯಂತ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಲಾಗುತ್ತಿದೆ.

ದೆಹಲಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಶೋಷಿತರ ಕಲ್ಯಾಣಕ್ಕಾಗಿ ಅವರು ಹೊಂದಿರುವ ವಿಚಾರಗಳಿಂದ ನಮ್ಮ ಸರ್ಕಾರ ಪ್ರೇರಿತವಾಗಿರುವುದಾಗಿ ತಿಳಿಸಿದ್ದಾರೆ.

ಅಂಬೇಡ್ಕರ್ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೂರ್ತಿ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತದನಂತರ ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ನಿವಾಸಿಗಳಿಗೆ ನಿರ್ಮಾಣಗೊಂಡಿರುವ ಬಹುಮಹಡಿ ಕಟ್ಟಡವನ್ನು ಉದ್ಘಾಟಿಸಿದ ಮುಖ್ಯಮಂತ್ರಿ, ಎರಡನೇ ಹಂತದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

No Comments

Leave A Comment