Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಕುಂದಾಪುರ: ಉಡುಪಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಆಗಮನಕ್ಕೆ ಜಿಲ್ಲಾಡಳಿತದಿಂದ ನಿರ್ಬಂಧ

ಕುಂದಾಪುರ:ಏ, 14.ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ಹಿನ್ನೆಲೆಯಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥರಾದ ಪ್ರಮೋದ ಮುತಾಲಿಕ್ ಅವರನ್ನು ಉಡುಪಿ ಜಿಲ್ಲೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಿ ಸಿ.ಆರ್.ಪಿ.ಸಿ ಸೆಕ್ಷನ್‌ 133, 143 ಮತ್ತು 144 ರನ್ವಯ ಜಿಲ್ಲಾಧಿಕಾರಿ ಕೂರ್ಮಾರಾವ್ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ. ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 133, 143 ಮತ್ತು 144ರನ್ವಯ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ 15ರಂದು ಹಿಂದೂ ಜಾಗರಣಾ ವೇದಿಕೆ ಗಂಗೊಳ್ಳಿ ವತಿಯಿಂದ ಗಂಗೊಳ್ಳಿ ಗ್ರಾಮದ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಸಂಜೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರಮೋದ ಮುತಾಲಿಕ್ ಪಾಲ್ಗೊ೦ಡು ಪ್ರಚೋಧನಾಕಾರಿ ಭಾಷಣ ಮಾಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸೌಹರ್ದತೆಗೆ ಧಕ್ಕೆ ಆಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳು ಹೆಚ್ಚಾಗಿವೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮವು ಸೂಕ್ಷ್ಮ ಪ್ರದೇಶವಾಗಿದ್ದು ಈ ಹಿಂದೆ 2014ರಿಂದ ಕೋಮು ಪ್ರೇರಿತ ಘಟನೆ ನಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 15ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಮೋದ ಮುತಾಲಿಕ್, ಇವರ ಆಗಮನವನ್ನು ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಲು ಆದೇಶಿಸುವಂತೆ ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರು ಉಲ್ಲೇಖ(2)ರಂತೆ ಮನವಿ ಸಲ್ಲಿಸಿದ್ದರು.

ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಈ ಆದೇಶವನ್ನು ಹೊರಡಿಸಲಾಗಿದೆ.

No Comments

Leave A Comment