Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಜುಲೈ 1ರಿಂದ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು ಒಂದು ತಿಂಗಳು ಪೂರ್ಣಗೊಂಡಿದ್ದು, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜುಲೈ 1 ರಿಂದ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ.

ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದು ಪಂಜಾಬ್‌ನಲ್ಲಿ ಕಳೆದ ತಿಂಗಳು ಮುಕ್ತಾಯವಾದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿತ್ತು. ಇದೀಗ ತಮ್ಮ ಮೊದಲ ಭರವಸೆ ಈಡೇರಿಸಲು ಮುಂದಾಗಿದ್ದಾರೆ.

ಗುರುವಾರ ಜಲಂಧರ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಮಾನ್ 16ರಂದು ಪಂಜಾಬ್ ಜನತೆಗೆ ಉತ್ತಮ ಸುದ್ದಿ ನೀಡಲಿದ್ದೇವೆ ಎಂದಿದ್ದರು. ಪಂಜಾಬ್‌ನಲ್ಲಿ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ ಕುರಿತು ಚರ್ಚಿಸಲು ಮಾನ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.

ಮನ್ ಕಳೆದ ತಿಂಗಳು ರಾಜ್ಯದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದರು. ಈ ಮೂಲಕ ಆಮ್ ಆದ್ಮಿ ಪಕ್ಷ ಒಂದೊಂದೇ ಭರವಸೆ ಈಡೇರಿಸುತ್ತಿದೆ.

No Comments

Leave A Comment