Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಹಿಜಾಬ್ ತೀರ್ಪಿನ ವಿರುದ್ಧ ಮೇಲ್ಮನವಿ: ಅರ್ಜಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ನೀಡಿದೆ.

ಹಿಜಾಬ್ ವಿವಾದ ಸಂಬಂಧ ಈ ಹಿಂದೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಇಂದು ನ್ಯಾಯಮೂರ್ತಿ ಎನ್‌ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದರು.

ಈ ವೇಳೆ ನ್ಯಾಯಮೂರ್ತಿಗಳು ನಾವು ಅರ್ಜಿಯನ್ನು ಪರಿಗಣಿಸುತ್ತೇವೆ. ಎರಡು ದಿನ ಕಾಲ ಕಾಯುವಂತೆ ಅವರು ಹೇಳಿದ್ದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು.

ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಈ ಹಿಂದೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ನ್ಯಾಯಾಲಯದ ಈ ಆದೇಶದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

No Comments

Leave A Comment