Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಪದ್ಮವಿಭೂಷಣ ರಾಜರ್ಷಿ ಡಾ/ ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 25 ಲಕ್ಷ ದೇಣಿಗೆ

ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಪದ್ಮವಿಭೂಷಣ ರಾಜರ್ಷಿ ಡಾ/ ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 25 ಲಕ್ಷ ದೇಣಿಗೆ

ಜೀರ್ಣೋದ್ಧಾರಗೊಳ್ಳುತ್ತಿರುವ ಉಡುಪಿಯ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಪದ್ಮವಿಭೂಷಣ ರಾಜರ್ಷಿ ಡಾ/ ಡಿ. ವೀರೇಂದ್ರ ಹೆಗ್ಗಡೆಯವರು ರೂ. 25.00 ಲಕ್ಷ ದೇಣಿಗೆಯಾಗಿ ನೀಡಿದ್ದಾರೆ.

ಸಮಗ್ರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ಹಾಗೂ ದೇವಸ್ಥಾನದ ಮಂಡಳಿಗೆ ಇಂದು ದಿನಾಂಕ 25-04-2022 ರಂದು ದೇಣಿಗೆಯ ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಗಿರೀಶ್ ಅಂಚನ್, ಸತೀಶ್ ಕುಲಾಲ್, ಚೇತನ್ ಕುಮಾರ್ ದೇವಾಡಿಗ, ಅಶ್ವಥ್ ದೇವಾಡಿಗ, ರಾಕೇಶ್ ಜೋಗಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಕಾಮತ್, ಸದಸ್ಯರಾದ ಮನೀಶ್ ಜತ್ತನ್ನ ಉಪಸ್ಥಿತರಿದ್ದರು.

No Comments

Leave A Comment