Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಕಾರೊಂದು ಡಿವೈಡರ್ ಗೆ ಢಿಕ್ಕಿ : ಮೂವರು ಸ್ಥಳದಲ್ಲೇ ಸಾವು : 6 ಮಂದಿ ಗಾಯ‌

ಕುಣಿಗಲ್: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕುಣಿಗಲ್ ಸಮೀಪ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ರಬಸಕ್ಕೆ, ಕಾರು ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಮಂದಿ ಗಂಭೀರ ಗಾಯಗೊಂಡ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ಬೇಗೂರು ಸಮೀಪ ಮಂಗಳವಾರ ಬೆಳಗಿನ ಜಾವ ನಡೆದಿದೆ ‌.

ಅಪಘಾತದಲ್ಲಿ ಸಾವನ್ನಪ್ಪಿದವರು ರಾಮಯ್ಯ, ರಘು (38), ಹೆಬ್ಬಾಳ ಬಿ.ಎಲ್ ಸರ್ಕಲ್ ನ ವಿಜಯ್ (36), ಹಾಗೂ ಸಂತೋಷ ಎಂದು ಮಾಹಿತಿ ತಿಳಿಯಲಾಗಿದೆ.

ಕಾರು ಚಾಲಕ ಲೋಕೇಶ್ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ವಸಂತ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment