Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಅಮೇರಿಕಾ: ಕಾರು ಅಪಘಾತದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವು

ಅಮೇರಿಕಾ:ಮೇ 11. ಅಮೇರಿಕಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ 25 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.

ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗುಡದ ಅಣ್ಣಾರಾಮ್ ಮೂಲದ ಶ್ರೀನಿವಾಸ್ ರೆಡ್ಡಿ ಮತ್ತು ಅರುಣಾ ದಂಪತಿಯ ಪುತ್ರ ಕ್ರಾಂತಿ ಕಿರಣ್ ರೆಡ್ಡಿಸರೆಡ್ಡಿ ಎಂದು ಗುರುತಿಸಲಾಗಿದೆ. ಇವರು ಸೆಂಟ್ರಲ್ ಮಿಸೌರಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದು, ಈ ವರ್ಷದ ಆಗಸ್ಟ್‌ನಲ್ಲಿ ಅವರು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಬೇಕಿತ್ತು.

ಮೇ 7ರಂದು ಸುಮಾರು 7.30 ರ ಸುಮಾರಿಗೆ ಕ್ರಾಂತಿಯವರ ಕಾರು ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ರಾಂತಿ ಕಂಪ್ಯೂಟರ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಂಟರ್ನ್‌ಶಿಪ್ ಗಾಗಿ ಪ್ರಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೃತದೇಹವನ್ನು ಸ್ವದೇಶಕ್ಕೆ ತರಲು ಕುಟುಂಬಕ್ಕೆ ಸಹಾಯ ಮಾಡುವಂತೆ ಅವರ ಪೋಷಕರು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

No Comments

Leave A Comment