Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಚೀನಾ: ರನ್ ವೇನಲ್ಲಿ ಧಗಧಗನೆ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್ ವಿಮಾನ, 40ಪ್ರಯಾಣಿಕರಿಗೆ ಗಾಯ- ವಿಡಿಯೋ ವೈರಲ್

ಬೀಜಿಂಗ್: ಚೀನಾದ ಚಾಂಗ್ ಕಿಂಗ್ ನಲ್ಲಿ ಇಂದು ಬೆಳಗ್ಗೆ ಭಾರೀ ಅವಘಡವೊಂದು ತಪ್ಪಿದೆ. ಟಿಬೆಟ್ ಏರ್ ಲೈನ್ಸ್ ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್ ವೇನಲ್ಲಿ ಹೊತ್ತಿ ಉರಿದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ ಅವಘಡ ನಡೆದಿದೆ.

ಚೀನಾದ ಅಧಿಕೃತ ಪತ್ರಿಕೆ ಪೀಪಲ್ಸ್ ಡೈಲಿ ಪ್ರಕಾರ, ಈ ವಿಮಾನದಲ್ಲಿ 113 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿ ಇದ್ದರು ಎನ್ನಲಾಗಿದ್ದು, 40 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏರ್ ಬಸ್ ಎ319 ವಿಮಾನ ಚೋಂಗ್ ಕಿಂಗ್ ನಿಂದ ಟಿಬೆಟ್ ನ ರಾಜಧಾನಿ ಲ್ಹಾಸಾಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.  ಘಟನೆ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಮಾನ ಬೆಂಕಿಯನ್ನು ಉರಿಯುತ್ತಿರುವುದನ್ನು ಕಾಣಬಹುದು.

No Comments

Leave A Comment