Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನ

ಅಬುಧಾಬಿ:ಮೇ 13. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್(73) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರದಿಂದ 40 ದಿನಗಳ ಕಾಲ ಅಧ್ಯಕ್ಷರ ನಿಧನಕ್ಕೆ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಘೋಷಿಸಿದೆ.

ಇನ್ನು ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಕೆಲಸವನ್ನು ನಿಲ್ಲಿಸಬೇಕು ಎಂದು ದುಬೈ ಮಾಧ್ಯಮ ಕಚೇರಿ ಸ್ಪಷ್ಟಪಡಿಸಿದೆ.

ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2004ರ ನವೆಂಬರ್ 3ರಿಂದ ಯುಎಇ ನ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರನಾಗಿದ್ದರು.

No Comments

Leave A Comment