Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಉಡುಪಿ: ಕೊಲ್ಲೂರು, ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು.

ಇದೇ ವೇಳೆ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅವರನ್ನು ಆಡಳಿತ ಮಂಡಳಿ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿತು. ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ, ನರಸಿಂಹ ಅಡಿಗರ ಉಸ್ತುವಾರಿಯಲ್ಲಿ ದೇವಿಗೆ ಆಯೋಜಿತವಾಗಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಮನ ಸಲ್ಲಿಸಿದರು. ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಹ ಇದ್ದರು.

ಇಂದು ಮಧ್ಯಾಹ್ನ 2.30ಕ್ಕೆ ಉಡುಪಿ ಕುಕ್ಕಿಕಟ್ಟೆಯಲ್ಲಿರುವ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಸ್ತರಿತ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಟಿ.ಎ. ಪೈ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಆಯೋಜಿತವಾಗಿರುವ ಎರಡು ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್‌ ಭಾಗಿಯಾಗಲಿದ್ದಾರೆ.

No Comments

Leave A Comment