BREAKING NEWS >
ಕರಾವಳಿಯಲ್ಲಿ ಮು೦ದುವರಿದ ಮಳೆ-ತಗ್ಗು ಪ್ರದೇಶಗಳಲ್ಲಿ ಏರುತ್ತಿರುವ ಮಳೆಯ ನೀರಿನ ಮಟ್ಟ....

ವಿಧಾನ ಪರಿಷತ್​ನ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ಬೆಂಗಳೂರು:ಮೇ 17. ವಿಧಾನ ಪರಿಷತ್​ನ ಹಂಗಾಮಿ ಸಭಾಪತಿಯನ್ನಾಗಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ಮೇ 16ರಂದು ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಮಲ್ಕಾಪುರೆ ಅವರನ್ನು ಸಭಾಪತಿಯನ್ನಾಗಿ ನೇಮಿಸಿ ರಾಜ್ಯಪಾಲ ಥಾವರ್‌ಚಂದ್ರ ಗೆಹ್ಲೋಟ್ ಅವರು ನೇಮಿಸಿ ಆದೇಶಿಸಿದ್ದಾರೆ.

ಇನ್ನು ವಿಧಾನ ಪರಿಷತ್ ಸದಸ್ಯರಾಗಿರುವ ರಘುನಾಥ್ ರಾವ್ ಮಲ್ಕಾಪುರೆ ಮೂಲತಃ ಬೀದರ್ ಜಿಲ್ಲೆಯವರಾಗಿದ್ದಾರೆ.

No Comments

Leave A Comment