Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ

ಅಹ್ಮದಾಬಾದ್: ಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಕಾಂಗ್ರೆಸ್ ನ ಎಲ್ಲಾ ಹುದ್ದೆಗಳಿಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಗುಜರಾತ್ ನಲ್ಲಿ ವರ್ಷಾಂತ್ಯಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದಿರುವುದು ಮಹತ್ವ ಪಡೆದುಕೊಂಡಿದೆ.  ಸ್ಥಳೀಯ ಸಂಘಟನೆಯ ವಿಷಯವಾಗಿ ರಾಜ್ಯ ಮಟ್ಟದ ಕಾಂಗ್ರೆಸ್ ನೊಂದಿಗೆ ಹಾರ್ದಿಕ್ ಪಟೇಲ್ ಅಸಮಾಧಾನ ಹೊಂದಿದ್ದರು ಎಂದು ತಿಳಿದುಬಂದಿದೆ.

ಕೆಲವು ದಿನಗಳ ಹಿಂದೆ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದ ಹಾರ್ದಿಕ್ ಪಟೇಲ್ ಬಿಜೆಪಿಯೊಂದಿಗೆ ಮಾತುಕತೆ ನಡೆಸ್ತಿದ್ದಾರಾ ಎಂಬ ಪ್ರಶ್ನಿಗೆ ಉತ್ತರಿಸಲು ನಿರಾಕರಿಸಿದ್ದ ಅವರು ಬಿಜೆಪಿಯ ಬಗ್ಗೆ ಕೆಲವು ಒಳ್ಳೆಯ ವಿಷಯಗಳಿವೆ. ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು.

No Comments

Leave A Comment