BREAKING NEWS >
'ಶಾಸಕರ ಸಂಖ್ಯಾಬಲ ಯಾವ ಕ್ಷಣದಲ್ಲಿಯೂ ಬದಲಾಗಬಹುದು, ಸದನ ಪರೀಕ್ಷೆಯಲ್ಲಿ ಗೆದ್ದೇ ಗೆಲ್ಲುತ್ತೇವೆ': ಸಂಜಯ್ ರಾವತ್...ಅಸ್ಸಾಂ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರ; ನೀರಿನಲ್ಲಿ ಮುಳುಗಿದ ಸಿಲ್ಚಾರ್; ಸಾವಿನ ಸಂಖ್ಯೆ 108ಕ್ಕೆ ಏರಿಕೆ...

ಏಕಲವ್ಯ ಪ್ರಶಸ್ತಿ ವಿಜೇತ ಕಬ್ಬಡ್ಡಿ ಆಟಗಾರ ಉದಯ ಚೌಟ ನಿಧನ

ಬಂಟ್ವಾಳ: ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ, ಬ್ಯಾಂಕ್ ಉದ್ಯೋಗಿಯಾಗಿದ್ದ ಉದಯ ಚೌಟ ಮೇ.21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ವಾಸವಿದ್ದರು.

 ಪ್ರಸ್ತುತ ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿದ್ದರು. ಅಲ್ಲದೆ ಅವರು ದ.ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷರೂ ಆಗಿದ್ದರು. ಉದಯ ಚೌಟ ಅವರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. ಬಳಿಕ 2007ರ ಕಬಡ್ಡಿ  ವಿಶ್ವಕಪ್‍ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.

ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ. ಇದೀಗ ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

No Comments

Leave A Comment