Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

2 ವರ್ಷದ ಮಗನಿಗೆ ಕೀಟನಾಶಕ ಕುಡಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಸೂರತ್: 31 ವರ್ಷದ ಮಹಿಳೆ ತನ್ನ 2 ವರ್ಷದ ಮಗುವಿಗೆ  ಕೀಟನಾಶಕ ನೀಡಿ, ಬಳಿಕ ತಾನೂ ವಿಷ ಸೇವಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​​ನ ಸೂರತ್​ನಲ್ಲಿ ನಡೆದಿದೆ. ಇಲ್ಲಿನ ಸರ್ತಾನಾ ಪ್ರದೇಶದ ಯೋಗಿ ಚೋಕ್ ಶಿವಧಾರಾ ಕಾಂಪ್ಲೆಕ್ಸ್‌ನಲ್ಲಿ ಘಟನೆ ವರದಿಯಾಗಿದೆ. 

ಪೊಲೀಸರು ಗಸ್ತಿನಲ್ಲಿದ್ದಾಗ ಕಪೋದ್ರಾದ ಜಟಿಯಾ ಸರ್ಕಲ್‌ನಲ್ಲಿ ತಾಯಿ ಮತ್ತು ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹೀಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ತಾಯಿ ಮತ್ತು ಮಗುವನ್ನು ಕಂಡ ಪೊಲೀಸರು ತಕ್ಷಣ 108ಕ್ಕೆ ಕರೆ ಮಾಡಿ, ಸಿವಿಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು.

ತಾಯಿ ಆಸ್ಪತ್ರೆಗೆ ದಾಖಲಾದ ಸ್ಪಲ್ಪ ಸಮಯದಲ್ಲೇ ಮೃತಪಟ್ಟರೆ, ಅದೇ ರಾತ್ರಿ ಮಗು ಸಹ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಈ ನಡುವೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 
 
ಇನ್ನೊಂದು ಕಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಪತಿ, ತನ್ನ ಹೆಂಡತಿ ಮತ್ತು ಮಗ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. 
 
ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
No Comments

Leave A Comment