ಜೂನ್ 1ರಿಂದ ಜುಲೈ 31ರ ವರೆಗೆ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ
ಮಂಗಳೂರು: ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರೀಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ಮೀನುಗಾರರ ಹಿತದೃಷ್ಟಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದ್ದು ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.