BREAKING NEWS >
ಕರಾವಳಿಯಲ್ಲಿ ಮು೦ದುವರಿದ ಮಳೆ-ತಗ್ಗು ಪ್ರದೇಶಗಳಲ್ಲಿ ಏರುತ್ತಿರುವ ಮಳೆಯ ನೀರಿನ ಮಟ್ಟ....

ಬೆಳಗಾವಿ: ಕಾರು, ಲಾರಿ ನಡುವೆ ಅಪಘಾತ -ಒಂದೇ ಕುಟುಂಬದ ನಾಲ್ವರು ಮೃತ್ಯು

ಚಿಕ್ಕೋಡಿ:ಮೇ 27. ಬೆಳಗಾವಿಯ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಅದಗೊಂಡ ಪಾಟೀಲ್​ ಮತ್ತು ಛಾಯಾ ಪಾಟೀಲ್ ದಂಪತಿ, ಇವರ ಮಗ ಮಹೇಶ್ ಪಾಟೀಲ್, ಅದಗೊಂಡ ಪಾಟೀಲ್​ರ ತಾಯಿ ಚಾಪ್ಪಾತಾಯಿ ಎಂದು ಗುರುತಿಸಲಾಗಿದೆ.

ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.

5 ದಿನದ ಹಿಂದೆ ಧಾರವಾಡದಲ್ಲಿ ಮದುವೆ ದಿಬ್ಬಣದ ವಾಹನ ಅಪಘಾತಕ್ಕೀಡಾಗಿ ಒಂದೇ ದಿನ 8 ಮಂದಿ ಮೃತಪಟ್ಟಿದ್ದರು.

No Comments

Leave A Comment