Log In
BREAKING NEWS >
ದೆಹಲಿ ಮಹಾನಗರ ಪಾಲಿಕೆ ಆಪ್ ತೆಕ್ಕೆಗೆ; 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ, 150ಕ್ಕೂ ಹೆಚ್ಚು ವಾರ್ಡ್ ಗಳಲ್ಲಿ ಆಪ್‌ ಕಮಾಲ್‌...

ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ-ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ 1ಸ್ಥಾನ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.

ಒಟ್ಟು 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ.

ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್ ನಿಂದ ಟಿ ಎ ಶರವಣ  ಅವರು ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿತ್ತು. ಆದರೆ, ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

No Comments

Leave A Comment