Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಮಂಗಳೂರು: ಅಕ್ರಮವಾಗಿ ಮನೆಗೆ ನುಗ್ಗಿ ಹಲ್ಲೆ, ಬೆದರಿಕೆ – 8 ಮಂದಿಯ ಬಂಧನ

ಮಂಗಳೂರು:ಮೇ 30. ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಶಬಾಬ್(21) ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಅಫ್ರೀಶ್ (21), ಸುನೈಫ್ (21), ಶೇಖ್ ಮೊಹಿದ್ದೀನ್ (20), ಇಬ್ರಾಹಿಂ ರಾಜಿ (20), ಮೊಹಮ್ಮದ್ ಸಿನಾನ್ (21), ಮೊಹಮ್ಮದ್ ಆಶಾಮ್ (21), ಮೊಹಮ್ಮದ್ ಸೈಯದ್ (21), ಮೊಹಮ್ಮದ್ ಅಫಾಮ್ (20) ಎಂದು ಗುರುತಿಸಲಾಗಿದೆ.

ಕಾಲೇಜಿನಲ್ಲಿ ನಡೆದ ಕಲ್ಚರಲ್ ಕಾರ್ಯಕ್ರಮದಲ್ಲಿ ನಡೆದ ಗಲಾಟೆಯ ಕಾರಣದಿಂದ ದ್ವೇಷಗೊಂಡ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳು ಶಾಮಿಲಾಗಿದ್ದು, ಅವರಲ್ಲಿ ಎಂಟು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment